alex Certify ನಾಮಪತ್ರ ಸಲ್ಲಿಕೆ ಕೊನೆ ದಿನದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ: ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಮಪತ್ರ ಸಲ್ಲಿಕೆ ಕೊನೆ ದಿನದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅವಕಾಶವಿದೆ ಎಂದು ಹೈಕೋರ್ಟ್ ಆದೇಶಿಸಿದೆ.

ವಿಧಾನಸಭೆ ಕ್ಷೇತ್ರದ ಶಾಸಕರ ಹೆಸರನ್ನು ಆ ಕ್ಷೇತ್ರದ ಮತದಾರರ ಪಟ್ಟಿಯಿಂದ ತೆಗೆದು ಹಾಕುವಂತಹ ಕಾರ್ಯವಾಗಬಾರದು. ಈ ರೀತಿಯ ವಿಚಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್ ಮೊದಲಾದವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ.

ಶಾಸಕರ ಹೆಸರನ್ನೇ ಪಟ್ಟಿಯಿಂದ ತೆಗೆದುಹಾಕುವ ಪ್ರಸಂಗಗಳು ಎದುರಾಗದಂತೆ ಕ್ರಮ ವಹಿಸಬೇಕು ಎಂದು ಚುನಾವಣಾ ಆಯೋಗಕ್ಕೆ ನ್ಯಾಯಪೀಠ ನಿರ್ದೇಶನ ನೀಡಿದೆ. ಪ್ರಜಾಪ್ರತಿನಿಧಿ ಕಾಯ್ದೆ 1950 ಸೆಕ್ಷನ್ 23ರ ಪ್ರಕಾರ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿ ತಿದ್ದುಪಡಿ ಮಾಡುವುದಕ್ಕೆ ಅವಕಾಶವಿದೆ. ಹಾಗಾಗಿ, ಮತದಾರರ ಪಟ್ಟಿ ಪ್ರಕಟವಾದ ನಂತರ ಪಟ್ಟಿಯನ್ನು ಮತ್ತೆ ಪರಿಷ್ಕರಿಸಲು ಅವಕಾಶವಿಲ್ಲ ಎನ್ನುವ ಅರ್ಜಿದಾರರ ವಾದವನ್ನು ನ್ಯಾಯಪೀಠ ತಳ್ಳಿ ಹಾಕಿದೆ.

ಇದಲ್ಲದೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ನಂತರ ಸ್ಥಳಾಂತರಗೊಂಡವರು, ಮೃತಪಟ್ಟವರ ಹೆಸರನ್ನು ಪಟ್ಟಿಯಿಂದ ಕೈ ಬಿಡಲು ಆಯೋಗಕ್ಕೆ ಅವಕಾಶವಿದೆ. ಅಲ್ಲದೆ, ಮತದಾರರ ಪಟ್ಟಿಯಿಂದ ತಮ್ಮ ಹೆಸರು ಬಿಟ್ಟು ಹೋಗಿರುವ ವ್ಯಕ್ತಿಗಳು ಯಾವ ಸಂದರ್ಭದಲ್ಲಿ ಬೇಕಾದರೂ ತಮ್ಮ ಹೆಸರನ್ನು ನೋಂದಣಾಧಿಕಾರಿ ಮುಂದೆ ಅರ್ಜಿ ಸಲ್ಲಿಸಿ ಸೇರ್ಪಡೆ ಮಾಡಿಕೊಳ್ಳಬಹುದು.

ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದ ಕ್ಷೇತ್ರದಿಂದ ಸ್ಥಳಾಂತರಗೊಂಡವರ ಮತ್ತು ಮೃತಪಟ್ಟವರ ಹೆಸರು ತೆಗೆಯುವ ಮೂಲಕ ಪರಿಷ್ಕರಣೆ ಮಾಡಲು ಅವಕಾಶವಿಲ್ಲ ಎನ್ನುವ ಶಾಸಕರ ವಾದವನ್ನು ತಿರಸ್ಕರಿಸಿದ ಹೈಕೋರ್ಟ್ ನ್ಯಾಯಪೀಠ, ಮತದಾರರ ಪಟ್ಟಿ ಪರಿಷ್ಕರಣೆ ನಿರಂತರ ಪ್ರಕ್ರಿಯೆಯಾಗಿದೆ. ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬಹುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...