alex Certify ಸಚಿವ ದಿನೇಶ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಯತ್ನಾಳ್ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ದಿನೇಶ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಯತ್ನಾಳ್ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾದ ಎರಡು ಪ್ರತ್ಯೇಕ ಎಫ್ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧಪಟ್ಟ ವಿಚಾರಣೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠದಲ್ಲಿ ನಡೆದು ಮಧ್ಯಂತರ ಆದೇಶ ನೀಡಲಾಗಿದೆ. ಜೊತೆಗೆ ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಎಫ್ಐಆರ್ ದಾಖಲಿಸಿಕೊಂಡಿರುವ ವಿಜಯಪುರ ಗಾಂಧಿ ಚೌಕ ಠಾಣಾ ಪೊಲೀಸರು, ದೂರುದಾರರಾದ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮತ್ತು ಚುನಾವಣಾ ಸಂಚಾರಿ ವಿಚಕ್ಷಣಾ ದಳ ಅಧಿಕಾರಿ ಎಸ್.ಬಿ. ಜಿಡ್ಡಿಮನಿ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...