ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆಗೆ ಹೈಕೋರ್ಟ್ ನಿಂದ 10 ವಾರ ಕಾಲಾವಕಾಶ ನೀಡಲಾಗಿದೆ.
ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ನಿಗದಿ, ಕ್ಷೇತ್ರಗಳ ಪುನರ್ ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 10 ವಾರ ಕಾಲಾವಕಾಶ ನೀಡಿದೆ.
ರಾಜ್ಯ ಚುನಾವಣಾ ಆಯೋಗದಿಂದ ಅವಧಿ ಪೂರ್ಣಗೊಂಡ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆಗೆ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದೆ. ವಿಚಾರಣೆ ನಡೆಸಿದ ನ್ಯಾಯಾಲಯ 10 ವಾರ ಕಾಲಾವಕಾಶ ನೀಡಿದೆ.