ಬೆಂಗಳೂರು: ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ 12 ವಾರ ಗಡುವು ನೀಡಲಾಗಿದೆ.
ರಾಜ್ಯದಲ್ಲಿನ 31 ಜಿಪಂ ಮತ್ತು 239 ತಾಪಂ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಸರ್ಕಾರದಿಂದ ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ ತಿದ್ದುಪಡಿ ಕಾಯ್ದೆ 2021 ರ ಜಾರಿಗೆ ಸಂಬಂಧಿಸಿದಂತೆ ಹೊರಡಿಸಿದ್ದ ಗೆಜೆಟ್ ಅಧಿಸೂಚನೆಯನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗದ ವತಿಯಿಂದ ಸಲ್ಲಿಸಲಾದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ, ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯಪೀಠ ಸರ್ಕಾರ ಕೇಳಿದ್ದ ಆರು ತಿಂಗಳ ಸಮಯದ ಬದಲಿಗೆ 12 ವಾರಗಳ ಗಡುವು ನೀಡಿ ವಿಚಾರಣೆಯನ್ನು ಮುಂದೂಡಿದೆ.