ಬೆಂಗಳೂರು: ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವವರೆಗೆ ತಡೆ ನೀಡಲು ಪ್ರಜ್ವಲ್ ರೇವಣ್ಣ ಮನವಿ ಮಾಡಿದ್ದರು. ಸಂಸದ ಸ್ಥಾನ ಅಸಿಂಧು ಆದೇಶಕ್ಕೆ ತಡೆ ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೆ.ನಟರಾಜನ್ ಸಂಸದ ಸ್ಥಾನ ಅಸಿಂಧು ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಅರ್ಜಿ ವಜಾಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾದಂತಾಗಿದೆ.
ಚುನಾವಣೆ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ ನೀಡಿತ್ತು.