ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಿಗೆ ಇಂಟರ್ನೆಟ್ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
189 ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಮತ್ತು ಇಂಟರ್ನೆಟ್ ಸೌಲಭ್ಯಗಳನ್ನು 14.97 ಕೋಟಿ ಮೊತ್ತದಲ್ಲಿ ಟೆಂಡರ್ ಮೂಲಕ ಖರೀದಿಸಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 4848 ಸರ್ಕಾರಿ ಪ್ರೌಢಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, 2521 ಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಗಳಿವೆ. ಉಳಿದ 2327 ಶಾಲೆಗಳಿಗೆ ಕಂಪ್ಯೂಟರ್ ಲ್ಯಾಬ್, ಯುಪಿಎಸ್, ಇಂಟರ್ನೆಟ್ ಸೌಲಭ್ಯ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಹೇಳಿದ್ದಾರೆ.
ರಾಜ್ಯದ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲು ಸಂಪುಟ ಅನುಮೋದನೆ ನೀಡಿದೆ. ಪ್ರತಿ ಘಟಕಕ್ಕೆ 55.13 ಲಕ್ಷ ರೂಪಾಯಿ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ.