ಬೆಂಗಳೂರು: ತೋಟಗಾರಿಕೆ ವಲಯದ ಏಳ್ಗೆಗೆ ಸರ್ಕಾರ ಆದ್ಯತೆ ನೀಡಿದ್ದು, ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತೋಟಗಾರಿಕಾ ಕ್ಷೇತ್ರದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕೆ’ ಎಂಬ ಶೀರ್ಷಿಕೆಯಡಿ ವಿನೂತನ ಕಾರ್ಯಕ್ರಮ ಜಾರಿ ಮಾಡಲಾಗಿದೆ.
12,988 ಹೆಕ್ಟೇರ್ ಪ್ರದೇಶಗಳಲ್ಲಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಅಭಿವೃದ್ಧಿಪಡಿಸಿ 35.67 ಲಕ್ಷ ಮಾನವ ದಿನಗಳ ಸೃಜನೆ ಮಾಡಲಾಗಿದೆ.
ಮೈಸೂರಿನಲ್ಲಿ ತೋಟಗಾರಿಕೆ ಇಲಾಖೆಯಡಿ 15 ಎಕರೆ ವಿಸ್ತೀರ್ಣದ ಲಿಂಗಾಂಬುಧಿ ಸಸ್ಯ ಶಾಸ್ತ್ರೀಯ ತೋಟ ಲೋಕಾರ್ಪಣೆ ಮಾಡಲಿದ್ದು, ಹೆಚ್ಚು ಇಂಗಾಲವನ್ನು ಹಿಡಿದಿಟ್ಟುಕೊಳ್ಳುವ ಬೆಳೆಗಳನ್ನು ಗುರುತಿಸಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಲು ಕ್ರಮ ವಹಿಸಲಾಗಿದೆ.