ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 6,000 ಅತಿಥಿ ಶಿಕ್ಷಕರ ನೇಮಕಾತಿಗೆ ಸೂಚನೆ ನೀಡಲಾಗಿದೆ.
2023 -24ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ 6,000 ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಆಯುಕ್ತರು ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಂಬಂಧಿಸಿದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರ ಮೂಲಕವೇ ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಭರ್ತಿ ಮಾಡುವವರಿಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಯಾವುದೋ ಮೊದಲ ಅಲ್ಲಿಯವರೆಗೆ ಆರು ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು.
ಕರ್ನಾಟಕ ಪಬ್ಲಿಕ್ ಶಾಲೆ, ಆದರ್ಶ ವಿದ್ಯಾಲಯ, ಅತಿ ಹೆಚ್ಚು ಮಕ್ಕಳಿರುವ ಶಾಲೆ, ಗಣಿತ, ವಿಜ್ಞಾನ, ಇಂಗ್ಲಿಷ್ ವಿಷಯದ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದ್ಯತೆ ನೀಡಬೇಕು ಎಂದು ಹೇಳಲಾಗಿದೆ. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ 27 ಸಾವಿರ ಶಿಕ್ಷಕರ ನೇಮಕಾತಿಗೆ ಈಗಾಗಲೇ ಸೂಚನೆ ನೀಡಲಾಗಿದೆ.