
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಶಿಕ್ಷಕರ ಹುದ್ದೆಗಳ ಆರರಿಂದ ಎಂಟನೇ ತರಗತಿಗೆ ಬೋಧಿಸುವ 15,000 ಶಿಕ್ಷಕರ ಹುದ್ದೆಗಳ ನೇಮಕಾತಿಯಲ್ಲಿ 13363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
2023ರ ಫೆಬ್ರವರಿಯಲ್ಲಿ 2500 ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಪದವೀಧರ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅವರು, 15,000 ಶಿಕ್ಷಕರ ನೇಮಕಾತಿ ನಂತರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮತ್ತೆ ಸಿಇಟಿ ನಡೆಸುವ ಕುರಿತು ಪ್ರತಿಕ್ರಿಯೆ ನೀಡಿ, ಫೆಬ್ರವರಿಯಲ್ಲಿ 2500 ಪ್ರೌಢಶಾಲೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.