ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಶಾಲೆಯಲ್ಲಿ ಮಂಜೂರಾಗಿರುವ ವಿಷಯ ಬೋಧನೆ ಮಾಡುವ 3253 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಆಯಾ ಶಾಲೆ ಶಿಕ್ಷಕರಿಗೆ ನೇಮಕಾತಿ ಜವಾಬ್ದಾರಿ ನೀಡಲಾಗಿದೆ.
ಜಿಲ್ಲಾವಾರು 5078 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, 3253 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಹೆಚ್ಚುವರಿಯಾಗಿ 1825 ಅತಿಥಿ ಶಿಕ್ಷಕರ ನೇಮಕಾತಿಗೆ ಆಡಳಿತಾತ್ಮಕ ಅನುಮೋದನೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ನಂತರ ಹೆಚ್ಚುವರಿ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗುವುದು ಎಂದು ಹೇಳಲಾಗಿದೆ.
10 ಸಾವಿರ ರೂ. ಗೌರವಧನ ಕಡಿತ ಮಾಡಲಾಗಿದ್ದು, ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳು 8 ಸಾವಿರ ರೂ. ಗೌರವಧನ ನೀಡಲಾಗುವುದು ಎನ್ನಲಾಗಿದೆ.