alex Certify ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 3253 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 3253 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು: ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಶಾಲೆಯಲ್ಲಿ ಮಂಜೂರಾಗಿರುವ ವಿಷಯ ಬೋಧನೆ ಮಾಡುವ ಶಿಕ್ಷಕರ ಹುದ್ದೆಗಳ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು.

ಎಲ್ಲ ಜಿಲ್ಲೆಗಳಿಂದ ಪಡೆದ ಮಾಹಿತಿಯಂತೆ ಒಟ್ಟು 5078 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, 3253 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಒಟ್ಟು ಬೇಡಿಕೆಯ ಶೇಕಡ 64 ರಷ್ಟು ಅತಿಥಿ ಶಿಕ್ಷಕರ ಮಂಜೂರಾತಿಯಾಗಿದೆ.

3253 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತ ನೀಡಿದೆ. ಈ ರೀತಿ ನೇಮಕಾತಿ ಮಾಡಿಕೊಳ್ಳುವ ಅತಿಥಿ ಶಿಕ್ಷಕರಿಗೆ ಗೌರವಧನ ಪಾವತಿಸಲು ಶಿಕ್ಷಕರ ಹಾಗೂ ಅನುದಾನದ ವಿವರಗಳೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಗಿದೆ.

ಹೆಚ್ಚುವರಿಯಾಗಿ 1825 ಅತಿಥಿ ಶಿಕ್ಷಕರ ನೇಮಕಾತಿಗೆ ಆಡಳಿತಾತ್ಮಕ ಅನುಮೋದನೆ ಕೋರಿ ಸರ್ಕಾರದ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ನಂತರ ಹೆಚ್ಚುವರಿ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...