ಬೆಂಗಳೂರು : ವಿಧಾನಸೌಧದಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ನಡೆದಿದೆ. ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.
ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯನ್ನು ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ
• ಸಣ್ಣ ಕೈಗಾರಿಕೆಗಳ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ರಾಷ್ಟ್ರೀಯ ಸಣ್ಣ ಕೈಗಾರಿಕಾ ನಿಗಮ ಸಂಸ್ಥೆಗೆ ಹಂಚಿಕೆ ಮಾಡಲು ಪೀಣ್ಯ 1ನೇ ಹಂತದಲ್ಲಿರುವ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಕೈಗಾರಿಕಾ ವಸಾಹತುಗಳನ್ನು ವಾರ್ಷಿಕ 1 ರೂ. ಶುಲ್ಕದ ಆಧಾರದ ಮೇಲೆ 30 ವರ್ಷಗಳ ಕರಾರು ಅವಧಿಗೆ ನೀಡಲು ತೀರ್ಮಾನ
• ರಾಜ್ಯ ಕಾನೂನು ಆಯೋಗದ ಹೊಸ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗೆ ಮುಖ್ಯಮಂತ್ರಿಯವರಿಗೆ ಅಧಿಕಾರ
• ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹೆಸರಿನಲ್ಲಿ 5 ಕೋಟಿ ರೂ. ಷೇರು ಬಂಡವಾಳ ಹೊಂದಿರುವ ಹೊಸ ಕಂಪನಿ ಸ್ಥಾಪಿಸಲು ನಿರ್ಧಾರ
ಅಕ್ರಮ ಗಣಿಗಾರಿಕೆ ವಿರುದ್ಧ ತನಿಖೆಗೆ ರಚಿಸಲಾಗಿರುವ ಕರ್ನಾಟಕ ಲೋಕಾಯುಕ್ತದ ವಿಶೇಷ ತನಿಖಾ ತಂಡದ ಕಾರ್ಯಾವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲು ತೀರ್ಮಾನ
• ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 60 ಕ್ರಿಮಿನಲ್ ಮೊಕದ್ದಮೆಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ನಿರ್ಧಾರ
• ಬೆಂಗಳೂರಿನ ಓಕಳಿಪುರಂ ನಲ್ಲಿ 527.50 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ರೇಷ್ಮೆ ಭವನ ನಿರ್ಮಾಣ ಮಾಡಲು ಅನುಮೋದನೆ
• 13.75 ಕೋಟಿ ರೂ. ವೆಚ್ಚದಲ್ಲಿ ಇ – ಟೆಂಡರ್ ಅಥವಾ ಜೆಮ್ ಪೋರ್ಟಲ್ ಮುಖಾಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಪ್ರತಿ ವರ್ಷ ವಿತರಿಸಲಾಗುವ ಸೀರೆಗಳ ಖರೀದಿಗೆ ತೀರ್ಮಾನ
ಕೋವಿಡ್ – 19 ಸಮಯದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾರವರ ವಿಚಾರಣಾ ಆಯೋಗದ ಮಧ್ಯಂತರ ಸತ್ಯ ಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ನೇಮಿಸಲು ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.