alex Certify BIG NEWS : ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿದೆ |Karnataka Cabinet Meeting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಹೈಲೆಟ್ಸ್ ಹೀಗಿದೆ |Karnataka Cabinet Meeting

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಕುರಿತಾದ ಸಂಪೂರ್ಣ ವರದಿ ಇಲ್ಲಿದೆ.
ಕರ್ನಾಟಕ ಜನನ ಮರಣಗಳ ನೋಂದಣಿ (ತಿದ್ದುಪಡಿ) ನಿಯಮಗಳು 2024ಕ್ಕೆ ಅನುಮೋದನೆ

• ಬೆಂಗಳೂರಿನ ಸಂಪಂಗಿರಾಮ ನಗರದಲ್ಲಿ ಸಮಾಜ ಕಲ್ಯಾಣ ಭವನವನ್ನು ₹40 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

• ವಸತಿ ಶಾಲೆ / ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು ಮತ್ತು KREIS ವಸತಿ ಶಾಲೆ / ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ₹32.95 ಕೋಟಿ. ವೆಚ್ಚದಲ್ಲಿ ಶೇಂಗಾ ಚಿಕ್ಕಿ ಮತ್ತು ಪೌಷ್ಠಿಕಾಂಶದ ಪುಡಿಯನ್ನು ಖರೀದಿಸಿ, ಒದಗಿಸಲು ತೀರ್ಮಾನ.

• ಹೊಸಕೋಟೆ ತಾಲೂಕಿನ ರಸ್ತೆ ಅಭಿವೃದ್ಧಿಗೆ ₹54.25 ಕೋಟಿ ಮೊತ್ತವನ್ನು ರಾಜ್ಯ ಸರ್ಕಾರದ ವತಿಯಿಂದ ಭರಿಸಲು ತೀರ್ಮಾನ.

• ಅಲ್ಪಸಂಖ್ಯಾತ ಸಮುದಾಯದವರು ನಡೆಸುವ ಶೈಕ್ಷಣಿಕ ಸಂಸ್ಥೆಗಳಿಗೆ ಕಡ್ಡಾಯ ಪ್ರವೇಶಕ್ಕೆ ರಿಯಾಯಿತಿ ಒದಗಿಸುವ ಪ್ರಸ್ತಾವನೆಗೆ ಸಮ್ಮತಿ.

• ₹694 ಕೋಟಿ ವೆಚ್ಚದಲ್ಲಿ ಬಿಬಿಎಂಪಿ ವ್ಯಾಪ್ತಿಯ 389.68 ಕಿ.ಮೀ. ಉದ್ದದ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ತೀರ್ಮಾನ.

ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು 2024ಕ್ಕೆ ಅನುಮೋದನೆ
• ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಯೋಗಾಲಯಗಳಿಗೆ ₹19.70 ಕೋಟಿ ವೆಚ್ಚದಲ್ಲಿ ಉಪಕರಣಗಳನ್ನು ಖರೀದಿಸಲು ಒಪ್ಪಿಗೆ.

• ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಮಸೂದೆ 2024ಕ್ಕೆ ಅನುಮೋದನೆ.

• ₹2,500 ಕೋಟಿ ವೆಚ್ಚದಲ್ಲಿ ವಿಶ್ವಬ್ಯಾಂಕ್ ಸಹಯೋಗದೊಂದಿಗೆ ಸರ್ಕಾರಿ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ತೀರ್ಮಾನ.

• ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ವಸತಿ ಶಾಲೆಗಳು ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್ ಹಾಗೂ ಎಲೆಕ್ಟಿಕ್ ಹೀಟ್ ಪಂಪ್ಗಳನ್ನು ₹42 ಕೋಟಿ ವೆಚ್ಚದಲ್ಲಿ ಪೂರೈಸಲು ಆಡಳಿತಾತ್ಮಕ ಅನುಮೋದನೆ.

• ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿಯಿಂದ ಯಡ್ರಾಮಿವರೆಗಿನ ರಸ್ತೆ ಕಾಮಗಾರಿಯನ್ನು ₹25 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ತೀರ್ಮಾನ.

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯನ್ನು ₹97 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ.

• ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ, ಆಯುಕ್ತರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಮರುನಾಮಕರಣ ಮಾಡಲು ಒಪ್ಪಿಗೆ
• ಮಂಗಳೂರು – ಚೇರ್ವತ್ತೂರು – ಕರಾವಳಿ ಜಿಲ್ಲಾ ಮುಖ್ಯ ರಸ್ತೆಯ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು₹200 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

*28,405 ಕೋಟಿ ವೆಚ್ಚದಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ. ಉದ್ದದ ಮೆಟ್ರೋ ಕಾಮಗಾರಿಗೆ ಅನುಮೋದನೆ.

• ಬೆಂಗಳೂರು ನಗರ ಜಿಲ್ಲೆಯ ಹುಸ್ಕೂರು ಗ್ರಾಮದಲ್ಲಿ ಕೆಟಿಪಿಪಿ ಕಾಯ್ದೆಯಡಿ ಬಹುಮಹಡಿ ವಸತಿ ಸಮುಚ್ಚಯ ಯೋಜನೆಯನ್ನು ಕೈಗೊಳ್ಳಲು ತೀರ್ಮಾನ.

• ಎಸ್ಸಿ/ಎಸ್ಟಿ ಸಮುದಾಯದವರಿಗೆ ಅಪರೂಪದ ಮತ್ತು ಹೆಚ್ಚಿನ ವೆಚ್ಚದ ಕಾಯಿಲೆಗಳಿಗೆ ಗುಣಮಟ್ಟದ ಚಿಕಿತ್ಸೆಗಾಗಿ ₹47 ಕೋಟಿ ವ್ಯಯಿಸಲು ಒಪ್ಪಿಗೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...