ಮೈಸೂರು: ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿಎಂ, ಪ್ರಧಾನಿ ಮೋದಿ ಅವರ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಜಾತಿ ಆಧಾರದ ಮೇಲೆ ಜನರನ್ನು, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಜಾಬ್ ನಿಷೇಧಿಸಲಾಗಿತ್ತು. ಈಗ ಕಾಂಗ್ರೆಸ್ ಸರ್ಕಾರ ನಿಷೇಧ ಆದೇಶ ವಾಪಸ್ ಪಡೆದುಕೊಂಡಿದೆ.
ಮೈಸೂರಿನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿ, ಹಿಜಾಬ್ ನಿಷೇಧ ಆದೇಶ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಉಡುಪು ಧರಿಸುವುದು ಅವರವರ ಇಷ್ಟ. ಬಟ್ಟೆ ತೊಡುವುದು, ಊಟ ಮಾಡುವುದು ನಿಮಗೆ ಸೇರಿದ್ದು. ಅದಕ್ಕೆ ನಾನು ಏಕೆ ಅಡ್ಡಿಪಡಿಸಲಿ? ಬಟ್ಟೆ, ಜಾತಿ ಆಧಾರದ ಮೇಲೆ ಬಿಜೆಪಿ ಜನರನ್ನು ವಿಭಜಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಸುಳ್ಳು ಹಾಗೂ ಮೋಸ ಮಾಡುವವರ ಜೊತೆ ಯಾರು ಇರಬೇಡಿ. ವೋಟಿಗಾಗಿ ರಾಜಕೀಯ ಮಾಡಬಾರದು. ನಾವು ಸಮಾಜದಲ್ಲಿರುವ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.