ವಿಜಯಪುರ: ಹೈಕೋರ್ಟ್ ಮಧ್ಯಂತರ ಆದೇಶದ ನಡುವೆಯೂ ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದೆ. ವಿಜಯಪುರ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ತೆರಳುವುದಾಗಿ ಪಟ್ಟು ಹಿಡಿದಿದ್ದಾರೆ.
ವಿಜಯಪುರದ ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ಹಿಜಾಬ್ ಸಂಘರ್ಷ ಮುಂದುವರೆದಿದ್ದು, ನಿನ್ನೆ ವಿದ್ಯಾರ್ಥಿಯರು ಹಾಗೂ ಪೋಷಕರು ಹಿಜಾಬ್ ಗೆ ಅವಕಾಶ ನೀಡಬೇಕು ಎಂದು ಪ್ರತಿಭಟನೆ ನಡೆಸಿದ್ದರು. ಇಂದು ಕೂಡ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಆವರಣದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
BIG NEWS: ಸರ್ಕಾರಿ ನೌಕರನ ಎರಡನೇ ಪತ್ನಿಗೆ ಇಲ್ಲ ಪಿಂಚಣಿ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ
ನಿಯಮ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ನಗರದ 144 ಸೆಕ್ಷನ್ ಜಾರಿ ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ನೀಡಿದ್ದಾರೆ.