alex Certify ಕಾಲೇಜಿಗೆ ಹಿಜಾಬ್ ಧರಿಸಿ ಬರಲು ಪ್ರಚೋದನೆ ನೀಡಿದವರ ವಿರುದ್ಧ ಎಫ್ಐಆರ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜಿಗೆ ಹಿಜಾಬ್ ಧರಿಸಿ ಬರಲು ಪ್ರಚೋದನೆ ನೀಡಿದವರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿಕೊಂಡು ಬರುವಂತೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮೂವರ ವಿರುದ್ಧ ಯಲಹಂಕ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಶಿವಾಜಿನಗರದ ಸೈಯದ್ ಜುನೇದ್(23), ಸೂರಜ್ ದೀಪ್ತಾ(29), ಸಚ್ಚಿನ್ ಹೆಗಡೆ(23) ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಫೆ. 18 ರಂದು ಯಲಹಂಕ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜುಗಳ ಬಳಿ ಪಿಎಸ್ಐ ಸುನಿಲ್ ಕುಮಾರ್ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಾಲೇಜುಗಳ ಸಮೀಪ ನಿಂತಿದ್ದ ಆರೋಪಿಗಳು ವಿದ್ಯಾರ್ಥಿಗಳಿಗೆ ಸಂಘಟನೆ ಮಾಡಿಕೊಂಡು ಹಿಜಾಬ್ ಧರಿಸಿ ಬರುವಂತೆ ಪ್ರಚೋದನೆ ನೀಡುತ್ತಿದ್ದರು. ಅಲ್ಲದೆ, ಕಾಲೇಜು ಸುತ್ತಮುತ್ತ ಜೋರಾಗಿ ಕೂಗಿ ಅಶಾಂತಿ ಉಂಟು ಮಾಡಲು ಯತ್ನಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...