ಬೆಂಗಳೂರು: ರಾಜ್ಯದ ಕೆಲವು ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪದವಿಪೂರ್ವ ಕಾಲೇಜುಗಳಿಗೆ ಫೆ. 15 ರ ವರೆಗೆ ರಜೆ ಘೋಷಿಸಲಾಗಿದೆ.
ಈ ಮೊದಲು ಫೆಬ್ರವರಿ 11 ರವರೆಗೆ ರಜೆ ನೀಡಲಾಗಿತ್ತು. ಶಾಂತಿ-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಫೆ 11 ರವರೆಗೆ ನೀಡಲಾಗಿದ್ದ ರಜೆಯನ್ನು 15 ರ ವರೆಗೂ ವಿಸ್ತರಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ವಿವಿಗಳು, ಪದವಿ ಕಾಲೇಜುಗಳು, ಎಂಜಿನಿಯರಿಂಗ್, ಡಿಪ್ಲೊಮಾ ಕಾಲೇಜುಗಳಿಗೆ ಫೆಬ್ರವರಿ 16 ರವರೆಗೆ ರಜೆ ವಿಸ್ತರಿಸಲಾಗಿದೆ.