ಬೆಂಗಳೂರು: ಹಿಜಾಬ್ ವಿವಾದದ ವಿಚಾರಣೆಗೆ ಹೈಕೋರ್ಟ್ ನಿಂದ ವಿಶೇಷ ಪೂರ್ಣ ಪೀಠವನ್ನು ರಚಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚನೆ ಮಾಡಿದ್ದಾರೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರ ಪೂರ್ಣ ಪೀಠವನ್ನು ರಚನೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2:30 ಕ್ಕೆ ಹಿಜಾಬ್ ವಿವಾದದ ಅರ್ಜಿ ವಿಚಾರಣೆ ನಡೆಯಲಿದೆ.
ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಿನ್ನೆ ಮತ್ತು ಇಂದು ಹೈಕೋರ್ಟ್ ನಲ್ಲಿ ನಡೆದಿದೆ. ನ್ಯಾಯಮೂರ್ತಿಗಳು ಇಂದು ಮಧ್ಯಾಹ್ನ ವಿಚಾರಣೆ ಬಳಿಕ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಿದ್ದು, ಮುಖ್ಯನ್ಯಾಯಮೂರ್ತಿಗಳು ಹಿಜಾಬ್ ಪ್ರಕರಣದ ವಿಚಾರಣೆಗಾಗಿ ವಿಶೇಷ ಪೂರ್ಣ ಪೀಠವನ್ನು ರಚನೆ ಮಾಡಿದ್ದಾರೆ.