ಬೆಂಗಳೂರು: ನಾಳೆ ಹೈಕೋರ್ಟ್ ನಿಂದ ಹಿಜಾಬ್ ಪ್ರಕರಣದ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಒಂದು ವಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದೆ. ಬೆಂಗಳೂರಿನ ಎಲ್ಲ ಡಿಸಿಪಿಗಳ ಜೊತೆಗೆ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ.
ಸಭೆ ಬಳಿಕ ಎಲ್ಲ ಶಾಲಾ ಕಾಲೇಜುಗಳಲ್ಲಿ ಭದ್ರತೆ ಹೆಚ್ಚಳ, ನಾಳೆ ಹಿಜಾಬ್ ತೀರ್ಪು ಹಿನ್ನೆಲೆ ಅಗತ್ಯ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರು, ಜಂಟಿ ಪೊಲೀಸ್ ಆಯುಕ್ತರ ಜೊತೆಗೆ ಚರ್ಚೆ ನಡೆಸಿ, ಶಾಲಾ-ಕಾಲೇಜುಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಿಕೊಳ್ಳುವಂತೆ ಕಮಿಷನರ್ ಸೂಚನೆ ನೀಡಿದ್ದಾರೆನ್ನಲಾಗಿದೆ.