alex Certify BIG NEWS: ಶಾಲೆ-ಕಾಲೇಜುಗಳ ಗೇಟ್ ಹೊರಗೆ ತಡೆದು ಹಿಜಾಬ್ ತೆಗೆಸಬೇಡಿ, ತರಗತಿ ಪ್ರವೇಶಕ್ಕೆ ಮುನ್ನ ತೆಗೆದಿಡಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆ-ಕಾಲೇಜುಗಳ ಗೇಟ್ ಹೊರಗೆ ತಡೆದು ಹಿಜಾಬ್ ತೆಗೆಸಬೇಡಿ, ತರಗತಿ ಪ್ರವೇಶಕ್ಕೆ ಮುನ್ನ ತೆಗೆದಿಡಲು ಸೂಚನೆ

ಧಾರವಾಡ: ಸಮವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಿರುವ ಶಾಲೆ, ಕಾಲೇಜುಗಳಲ್ಲಿ ಗೇಟಿನ ಹೊರಗೆ ವಿದ್ಯಾರ್ಥಿನಿಯರನ್ನು ತಡೆದು ಹಿಜಾಬ್ ತೆಗೆಸಬಾರದು. ಆದರೆ, ಆವರಣ ಪ್ರವೇಶಿಸಿದ ಬಳಿಕ ತರಗತಿಗಳಿಗೆ ತೆರಳುವ ಮುನ್ನ ಹಿಜಾಬ್ ತೆಗೆದು ತರಗತಿ ಕೊಠಡಿ ಪ್ರವೇಶಿಸಲು ಅವಕಾಶವಿದೆ.

ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯೋಪಾಧ್ಯಾಯರು, ಪ್ರಾಚಾರ್ಯರು ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಿ, ವಿದ್ಯಾರ್ಥಿಗಳ ಪಾಠ, ಪ್ರವಚನಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಾಲೆ ಕಾಲೇಜುಗಳ ಆವರಣಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಹೊರತುಪಡಿಸಿ ಇತರೆ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು. ಪಾಲಕರು ಊಟ, ಉಪಹಾರ ತಂದು ಕೊಡಲು ಬಂದರೆ ಗೇಟಿನ ಬಳಿಯೇ ಸ್ವೀಕರಿಸುವ ವ್ಯವಸ್ಥೆ ಮಾಡಬೇಕು. ಯಾವುದೇ ಕಾರಣಕ್ಕೂ ಅನ್ಯವ್ಯಕ್ತಿಗಳಿಗೆ ಶಾಲೆ, ಕಾಲೇಜು ಆವರಣಕ್ಕೆ ಪ್ರವೇಶಿಸಲು ಅವಕಾಶ ನೀಡಬಾರದು. ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ-ಕಾಲೇಜುಗಳ ಮುಖ್ಯೋಪಾಧ್ಯಾಯರು, ಪ್ರಾಚಾರ್ಯರು ಈ ನಿರ್ದೇಶನವನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...