ಮಂಡ್ಯ: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ನಡೆದಿದ್ದ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷದ ವೇಳೆ ಏಕಾಂಗಿಯಾಗಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಗೆ ಮುಸ್ಲಿಂ ನಾಯಕರಿಂದ ಉಡುಗೊರೆಗಳು ಹರಿದು ಬರುತ್ತಿವೆ.
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮಂಡ್ಯದ ಪಿಇಎಸ್ ಪಿಯು ಕಾಲೇಜಿನಲ್ಲಿಯೂ ತಾರಕಕ್ಕೇರಿತ್ತು. ಈ ವೇಳೆ ಹಿಂದೂ ವಿದ್ಯಾರ್ಥಿನಿಯರು ಕೇಸರಿ ಶಾಲು ಧರಿಸಿ, ಜೈಶ್ರೀರಾಮ್ ಘೋಷಣೆ ಕೂಗಿದರೆ ಮುಸ್ಲಿಂ ವಿದ್ಯಾರ್ಥಿನಿ ಮುಸ್ಕಾನ್, ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಳು. ವಿದ್ಯಾರ್ಥಿನಿ ಧೈರ್ಯ ಮೆಚ್ಚಿ ಮುಸ್ಕಾನ್ ಗೆ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ಬಾಂದ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿಶಾನ್ ಸಿದ್ದಿಕಿ ಮುಸ್ಕಾನ್ ಮನೆಗೆ ಭೇಟಿ ನೀಡಿ ಐಫೋನ್ ಗಿಫ್ಟ್ ನೀಡಿದ್ದಾರೆ.
‘ತಂದೆ ಗೆಲ್ಲುವವರೆಗೂ ವಿವಾಹವಾಗುವುದಿಲ್ಲ’ : ನವಜೋತ್ ಸಿಂಗ್ ಸಿಧು ಪುತ್ರಿ ಶಪಥ
ಮಂಡ್ಯದ ಗುತ್ತಲ ಬಡಾವಣೆಯಲ್ಲಿರುವ ಮುಸ್ಕಾನ್ ಮನೆಗೆ ಭೇಟಿ ನೀಡಿದ ಶಾಸಕರು, ಐ ಫೋನ್ ಹಾಗೂ ಸ್ಮಾರ್ಟ್ ವಾಚ್ ಉಡುಗೊರೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ ಸಿದ್ದಿಕಿ, ಮುಸ್ಕಾನ್ ಘೋಷಣೆ ಕೂಗಿರುವುದು ಮಂಡ್ಯ ಮಾತ್ರವಲ್ಲ ಇಡೀ ಇಂಡಿಯಾದಲ್ಲೇ ಗರ್ವ ಎನಿಸುತ್ತಿದೆ. ಹಿಜಾಬ್ ಮುಸ್ಲಿಂ ಹೆಣ್ಣುಮಕ್ಕಳ ಹಕ್ಕು. ಹೆಣ್ಣುಮಕ್ಕಳು ತಮ್ಮ ಹಕ್ಕಿನ ಬಗ್ಗೆ ಧೈರ್ಯದಿಂದ ಧ್ವನಿ ಎತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಕಾರ್ಪೊರೇಟರ್ ಇಮ್ರಾನ್ ಪಾಷಾ ಕೂಡ ಮುಸ್ಕಾನ್ ಗೆ 1 ಲಕ್ಷ ರೂಪಾಯಿ ನೀಡಿದ್ದಾರೆ.