ಕಲಬುರ್ಗಿ: ರಾಜ್ಯದಲ್ಲಿ ಇತ್ತೀಚೆಗೆ ನಡೆದಿದ್ದ ಹಿಜಾಬ್ ಸಂಘರ್ಷದ ವೇಳೆ ವಿವಾದಾತ್ಮಕ ಹೇಳಿಕೆ ಹಾಗೂ ಬೆದರಿಕೆಯೊಡ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರೂ ಆಗಿರುವ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್, ಹಿಜಾಬ್ ವಿಚಾರಕ್ಕೆ ಬಂದರೆ ತುಂಡು ತುಂಡಾಗಿ ಕತ್ತರಿಸುವುದಾಗಿ ಹೇಳಿಕೆ ನೀಡಿ ಬೆದರಿಕೆಯೊಡ್ದಿದ್ದರು. ಈ ಹಿನ್ನೆಲೆಯಲ್ಲಿ ಮುಕ್ರಂ ಖಾನ್ ವಿರುದ್ಧ ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
WAR BREAKING: ದೇಶ ತೊರೆಯುವ ಪ್ರಶ್ನೆಯೇ ಇಲ್ಲ; ನಾನು ಯಾರಿಗೂ ಹೆದರುವುದೂ ಇಲ್ಲ; ರಷ್ಯಾಗೆ ತಿರುಗೇಟು ನೀಡಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ
ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಮುಕ್ರಂ ಖಾನ್, ಜಾಮೀನಿಗಾಗಿ ಅರ್ಜಿ ಸಲ್ಲಿಸಿದರು. ಜಾಮೀನು ಅರ್ಜಿ ತಿರಸ್ಕಾರಗೊಂಡಿದ್ದು, ಇದೀಗ ಮುಕ್ರಂ ಅವರನ್ನು ಹೈದರಾಬಾದ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.