
ನವದೆಹಲಿ: ರಾಜ್ಯದಲ್ಲಿನ ಹಿಜಾಬ್ ವಿವಾದ ಕುರಿತಂತೆ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಧರ್ಮದವರು ಶಿಕ್ಷಣ ಸಂಸ್ಥೆಗಳ ವಸ್ತ್ರ ಸಂಹಿತೆ ಪಾಲನೆ ಮಾಡಬೇಕು ಎನ್ನುವುದು ನನ್ನ ಅಭಿಪ್ರಾಯವಾಗಿದೆ. ಈ ವಿಚಾರದಲ್ಲಿ ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಎಲ್ಲಾ ಧರ್ಮದ ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಲ್ಲಿ ಸೂಚಿಸಲಾದ ಸಮವಸ್ತ್ರದ ನಿಯಮಗಳನ್ನು ಪಾಲಿಸಬೇಕು ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಸದ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಕೋರ್ಟ್ ತೀರ್ಪು ಏನೇ ಬಂದರೂ ಅದನ್ನು ಒಪ್ಪಿಕೊಳ್ಳುತ್ತೇನೆ. ಎಲ್ಲರೂ ಅದನ್ನು ಪಾಲಿಸಬೇಕಿದೆ. ಹಿಜಾಬ್ ವಿವಾದವನ್ನು ರಾಜಕೀಯಗೊಳಿಸಲು ವಿರೋಧಪಕ್ಷಗಳು ಯತ್ನಿಸುತ್ತಿದ್ದು, ಅದು ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.