alex Certify ಸರ್ಕಾರ ಹೈಕೋರ್ಟ್ ಆದೇಶ ತಪ್ಪಾಗಿ ಅರ್ಥೈಸಿದೆ; ಸಿಜೆ ಮಧ್ಯಪ್ರವೇಶಕ್ಕೆ SDPI ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರ ಹೈಕೋರ್ಟ್ ಆದೇಶ ತಪ್ಪಾಗಿ ಅರ್ಥೈಸಿದೆ; ಸಿಜೆ ಮಧ್ಯಪ್ರವೇಶಕ್ಕೆ SDPI ಮನವಿ

ಉಡುಪಿ: ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಎಸ್.ಡಿ.ಪಿ.ಐ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆ ನೀಡಿದ್ದಾರೆ.

ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಬಹಳ ಸ್ಪಷ್ಟವಾಗಿದೆ ಹೇಳಿದಂತೆ, ಆಡಳಿತ ಮಂಡಳಿ ಸಮವಸ್ತ್ರ ಕಡ್ಡಾಯಗೊಳಿಸಿದರೆ ಪಾಲಿಸಬೇಕಿದೆ. ಆದೇಶದಲ್ಲಿ ಈ ಕುರಿತು ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದಾರೆ. ಹಲವೆಡೆ ಈ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ. ಈ ಬಿಜೆಪಿ ಸರ್ಕಾರ ಕೋರ್ಟ್ ಆದೇಶವನ್ನು ತಿರುಚುತ್ತಿದೆ ಎಂದು ಆರೋಪಿಸಿದ್ದಾರೆ.

ಈ ವಿಚಾರದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮಧ್ಯಪ್ರವೇಶ ಮಾಡಬೇಕು. ಸರ್ಕಾರಕ್ಕೆ ಸಮವಸ್ತ್ರದ ಬಗ್ಗೆ ಸ್ಪಷ್ಟ ತಿಳಿವಳಿಕೆ ಕೊಡಬೇಕು. ಕಾಲೇಜುಗಳಲ್ಲಿ ಪೊಲೀಸರು ವಿದ್ಯಾರ್ಥಿನಿಯರನ್ನು ಬೆದರಿಸುತ್ತಿದ್ದಾರೆ. ಡಿಜಿ-ಐಜಿಪಿ ಮಧ್ಯಪ್ರವೇಶ ಮಾಡಿ ಸೂಚನೆ ನೀಡಬೇಕು. ಸಂವಿಧಾನ ವಿರೋಧಿಯಾಗಿ ವಿದ್ಯಾರ್ಥಿಗಳನ್ನು ನಡೆಸಿಕೊಳ್ಳಲಾಗುತ್ತಿದೆ. ಸಮಸ್ಯೆಯನ್ನು ಬಗೆಹರಿಸಿ ರಾಜ್ಯದ ಮಾನ ಕಾಪಾಡಿ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಡಿಜಿ-ಐಜಿಪಿ ಅವರಿಗೆ ಅಬ್ದುಲ್ ಮಜೀದ್ ಮನವಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...