ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪು ಎಲ್ಲರೂ ಪಾಲಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
BIG NEWS: ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ಸಿದ್ಧಪಡಿಸಲು 26 ತಂಡ ರಚನೆ
ಮಾರ್ಚ್ 28 ರಿಂದ ಏ.11 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದ್ದು, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಸರ್ಕಾರಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯವಾಗಿದ್ದು, ಖಾಸಗಿ ಶಾಲೆಗಳಲ್ಲಿ ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ನೀಡಿದೆ.
ಹೈಕೋರ್ಟ್ ತೀರ್ಪನ್ನು ಪಾಲಿಸುವಂತೆ ಶಿಕ್ಷಣ ಇಲಾಖೆ ಅಧಿಕೃತವಾಗಿ ಆದೇಶ ನೀಡಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಬಿಟ್ಟು ಹಾಜರಾಗುತ್ತಾರೆಯೇ ಕಾದುನೋಡಬೇಕಿದೆ.