
ಮಂಗಳೂರು: ಸೂಚನೆ ಬಳಿಕವೂ ಹಿಜಾಬ್ ಧರಿಸಿ ಬಂದಿದ್ದ 6 ವಿದ್ಯಾರ್ಥಿನಿಯರನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ಸರ್ಕಾರಿ ಕಾಲೇಜಿನ ಆಡಳಿತ ಮಂಡಳಿ ಅಮಾನತು ಮಾಡಿದೆ.
ಹಿಜಾಬ್ ವಿವಾದವನ್ನು ತಣ್ಣಗಾಗಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ನಡೆಸಿದ್ದು, ನಿಯಮಾನುಸಾರ ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬರದಂತೆ ಮಕ್ಕಳಿಗೆ ಸೂಚನೆ ನೀಡಲಾಗಿತ್ತು. ಸೂಚನೆ ನೀಡಿದ ನಂತರವೂ ಹಿಜಾಬ್ ಧರಿಸಿ ಬಂದ ಆರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.