ಚಿಕ್ಕಮಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ನಿಷೇಧ ಮಾಡಿರಲಿಲ್ಲ ಎಂದು ಸಿ.ಟಿ ರವಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾಲೇಜು ಆಡಳಿತ ಮಂಡಳಿ ತೀರ್ಮಾನಿಸುವ ಸಮವಸ್ತ್ರ ಪಾಲಿಸಬೇಕು ಅಂತ ನಿಯಮವಿತ್ತು. ಆದ್ರೆ ಈಗ ಸಿಎಂ ಸಿದ್ದರಾಮಯ್ಯ ಎಲ್ಲಾ ಯೂನಿಫಾರಂಗೂ ಹಿಜಬ್ ಕಡ್ಡಾಯ ಮಾಡಲು ಹೊರಟಿದ್ದಾರೋ ಅಥವಾ ಅವರಿಷ್ಟದಂತೆ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ ಎಂದರು.
ರಾಜ್ಯದಲ್ಲಿ ಹಿಜಾಬ್ ನಿಷೇಧ ಮಾಡಿರಲಿಲ್ಲ. ಸಿದ್ದರಾಮಯ್ಯ ಸಮವಸ್ತ್ರಕ್ಕೆ ಹಿಜಬ್ ಜೋಡಿಸುತ್ತಾರೋ ಅಥವಾ ಸಮವಸ್ತ್ರ ಕಡ್ಡಾಯ ಅನ್ನೋದನ್ನೇ ತೆಗೆಯುತ್ತಾರೋ ಗೊತ್ತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಹಿಜಾಬ್ ನಿಷೇಧ ಆಗಿರಲಿಲ್ಲ ಎಂದರು.