alex Certify BIG NEWS : ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ ; ವಾಹನ ಸಂಚಾರ ತಾತ್ಕಾಲಿಕ ಬಂದ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ ; ವಾಹನ ಸಂಚಾರ ತಾತ್ಕಾಲಿಕ ಬಂದ್..!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಸಕಲೇಶಪುರದ ದೊಡ್ಡತಪ್ಲು ಬಳಿಯ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ನೋಡ ನೋಡುತ್ತಲೇ ಗುಡ್ಡ ಕುಸಿದಿದೆ. ಸದ್ಯ ಜೆಸಿಬಿಯಿಂದ ಮಣ್ಣ ತೆಗೆಯುವ ಕಾರ್ಯಾಚರಣೆ ನಡೆಯುತ್ತಿದೆ ಈ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಮತ್ತೆ ರಸ್ತೆ ಸಂಚಾರ ಆರಂಭವಾಗಲಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದೆ.ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಮಣ್ಣು, ಕಲ್ಲಿನ ರಾಶಿಗಳು ಬಿದ್ದಿವೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...