ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಹೇಳಿದ ಪ್ರಧಾನಿ ಮೋದಿ, ಹಿಮಾಚಲ ಪ್ರದೇಶದಲ್ಲಿ ಪಕ್ಷದ ಸೋಲಿನ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಮೇಲಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಚಿರಋಣಿಯಾಗಿದ್ದೇನೆ. ಹಿಮಾಚಲ ಪ್ರದೇಶದ ಜನರಿಗೆ ಧನ್ಯವಾದ ಹೇಳುತ್ತೇನೆ ಎಂದು ಮೋದಿ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ರಾಜ್ಯದ ಆಶೋತ್ತರಗಳನ್ನು ಈಡೇರಿಸಲು, ಜನರ ಸಮಸ್ಯೆಗಳ ಬಗ್ಗೆ ಹೋರಾಡಲು ಬಿಜೆಪಿ ಶ್ರಮಿಸುತ್ತದೆ ಎಂದು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೋಲಿನ ಬಗ್ಗೆ ಪ್ರಧಾನಿ ಮೋದಿ ಟ್ರೀಟ್ ಮಾಡಿದ್ದಾರೆ.