ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆಯ 68 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. 412 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 55 ಲಕ್ಷ ಮತದಾರರು ನೂತನ ಶಾಸಕರನ್ನು ಆಯ್ಕೆ ಮಾಡಲಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಮಹತ್ವದ್ದಾಗಿರುವ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಈ ಬಾರಿ ಆಮ್ ಆದ್ಮಿ ಪಕ್ಷ ಕೂಡ ಪ್ರಬಲ ಪೈಪೋಟಿ ನೀಡುವ ಸಾಧ್ಯತೆ ಇದೆ.
ಹಿಮಾಚಲ ಪ್ರದೇಶದಲ್ಲಿ ಕಳೆದ ನಾಲ್ಕು ದಶಕಗಳಿಂದ ಸತತ ಎರಡನೇ ಬಾರಿ ಗೆದ್ದು ಯಾವ ಪಕ್ಷವೂ ಅಧಿಕಾರ ಹಿಡಿದಿಲ್ಲ. ಬಿಜೆಪಿ ಈ ದಾಖಲೆ ಮುರಿದು ಎರಡನೇ ಬಾರಿಗೆ ಅಧಿಕಾರ ಹಿಡಿದು ಇತಿಹಾಸ ಸೃಷ್ಠಿಸಲು ಯತ್ನ ನಡೆಸಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.