ನವದೆಹಲಿ: ಭಾರಿ ಮಳೆಗೆ ಉತ್ತರ ಭಾರತದ 10 ರಾಜ್ಯಗಳು ತತ್ತರಿಸಿವೆ. ಮಳೆ ಪ್ರವಾಹ ಸಂಬಂಧ ನಿನ್ನೆ ಒಂದೇ ದಿನ 20 ಜನ ಸಾವನ್ನಪ್ಪಿದ್ದಾರೆ. ಇದುವರೆಗೆ 140ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಜಲಪ್ರಳಯದ ಸ್ಥಿತಿ ನಿರ್ಮಾಣವಾಗಿದೆ. ಮಳೆ, ಪ್ರವಾಹದಿಂದ ಭಾರಿ ಹಾನಿಯಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಉತ್ತರಾಖಂಡ, ಹರಿಯಾಣ, ಪಂಜಾಬ್, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ಸೇರಿ 10 ರಾಜ್ಯದಲ್ಲಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ದೆಹಲಿಯಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ಮುಂಜಾಗ್ರತೆ ಕ್ರಮವಾಗಿ ಇಂದು ರಜೆ ನೀಡಲಾಗಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯ ಶಾಲೆಗಳಿಗೆ ರಜೆ ನೀಡಲಾಗಿದೆ.
ಉತ್ತರ ಭಾರತದ 10 ರಾಜ್ಯಗಳಲ್ಲಿ ಜಲ ದಿಗ್ಬಂಧನ ಉಂಟಾಗಿದ್ದು, ಅಪಾರ ಪ್ರಮಾಣದ ಜೀವ, ಪ್ರಾಣ ಹಾನಿ ಉಂಟಾಗಿದೆ. ಮಳೆ ಮತ್ತು ಪ್ರವಾಹದಿಂದ ಇದುವರೆಗೆ 140ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಮೂರು ದಿನದಲ್ಲಿ ಮಳೆಗೆ 72 ಜನ ಸಾವು ಕಂಡಿದ್ದಾರೆ. ಉತ್ತರ ಪ್ರದೇಶದಲ್ಲಿ 34, ದೆಹಲಿಯಲ್ಲಿ 12, ಜನ ಸಾವನ್ನಪ್ಪಿದ್ದಾರೆ. ರಾಜಸ್ಥಾನದಲ್ಲಿ 7 ಜನ, ಉತ್ತರಾಖಂಡಲ್ಲಿ 5 ಜನ ಮೃತಪಟ್ಟಿದ್ದಾರೆ.
ಮಧ್ಯಪ್ರದೇಶ, ಜಮ್ಮು ಕಾಶ್ಮೀರ, ಪಂಜಾಬ್, ಹರಿಯಾಣ, ಗುಜರಾತ್ ನಲ್ಲಿ ಮಳೆಯಿಂದ ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದೆ. ಉತ್ತರ ಭಾರತದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಭಾರಿ ಮಳೆಯಿಂದಾಗಿ ಉತ್ತರ ಭಾರತದ 10 ರಾಜ್ಯಗಳು ತತ್ತರಿಸಿ ಹೋಗಿವೆ. ಮಳೆ ಪೀಡಿತ ಹಲವು ರಾಜ್ಯಗಳಲ್ಲಿ ಮೂರು ದಿನ ಶಾಲೆಗಳಿಗೆ ರಜೆ ನೀಡಲಾಗಿದೆ
ವರುಣನ ರುದ್ರಾವತಾರಕ್ಕೆ ಹಿಮಾಚಲ ಪ್ರದೇಶ ತತ್ತರಿಸಿ ಹೋಗಿದ್ದು, ಮಳೆ ಮತ್ತು ಪ್ರವಾಹದಿಂದ ಹಲವು ಹೆದ್ದಾರಿಗಳಲ್ಲಿ ಭೂಕುಸಿತ ಉಂಟಾಗಿದೆ. ಪ್ರವಾಸಿ ತಾಣಗಳಿಗೆ ಸಂಪರ್ಕಿಸುವ ಹೆದ್ದಾರಿಗಳು ಬಂದ್ ಆಗಿವೆ. ಮಳೆ ಪ್ರವಾಹದಿಂದ 5000ಕ್ಕೂ ಹೆಚ್ಚು ಪೈಪ್ಲೈನ್ ಗಳಿಗೆ ಹಾನಿಯಾಗಿದೆ. ಪೈಪ್ ಲೈನ್ ಗಳಿಗೆ ಹಾನಿಯಾಗಿ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಹಿಮಾಚಲ ಪ್ರದೇಶದಲ್ಲಿ 785 ಕೋಟಿ ರೂ.ಗೂ ಹೆಚ್ಚು ಪ್ರಮಾಣದ ಆಸ್ತಿ ಹಾನಿಯಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡು ಸಾವಿರಾರು ಜನ ಸಂಕಷ್ಟದಲ್ಲಿ ಸಿಲುಕಿದ್ದಾರೆ. ವಿವಿಧಡೆ ಸಿಲುಕಿಕೊಂಡಿದ್ದ 300 ಜನರನ್ನು ರಕ್ಷಣೆ ಮಾಡಲಾಗಿದೆ.