alex Certify ಭೀಕರ ಬಸ್ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಬಸ್ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

ಭೀಕರ ಬಸ್ ಅಪಘಾತದಲ್ಲಿ ಸ್ಥಳದಲ್ಲೇ ಚಾಲಕ ಸೇರಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಹಿಮಾಚಲಪ್ರದೇಶದ ಶಿಮ್ಲಾದಲ್ಲಿ ನಡೆದಿದೆ.

ಶಿಮ್ಲಾದ ಜುಬ್ಬಲ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ರಸ್ತೆಯಲ್ಲಿಯೇ ಉರುಳಿಬಿದ್ದಿದೆ. ಘಟನೆಯಲ್ಲಿ ಬಸ್ ಚಾಲಕ, ಕಂಡಕ್ಟರ್, ಮಹಿಳೆ ಹಾಗೂ ನೇಪಾಳಿ ಪ್ರಜೆ ನಾಲ್ವರು ಸಾವನ್ನಪ್ಪಿದ್ದಾರೆ.

ಅಪಘಾತದ ವೇಳೆ ಬಸ್ ನಲ್ಲಿ 7 ಪ್ರಯಾಣಿಕರಿದ್ದರು. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...