ದಕ್ಷಿಣ ಭಾರತದಲ್ಲಿ ಮಾತ್ರವಲ್ಲ ಹಿಮಾಚಲ ಪ್ರದೇಶ, ಉತ್ತರಾಖಂಡಗಳಲ್ಲಿಯೂ ಭಾರಿ ಮಳೆಯಾಗುತ್ತಿದ್ದು, ಮೇಘ ಸ್ಫೋಟ, ಭೀಕರ ಪ್ರವಾಹಕ್ಕೆ ಶಿಮ್ಲಾ, ಉತ್ತರಾಖಂಡ ರಾಜ್ಯಗಳು ನಲುಗಿವೆ.
ಶಿಮ್ಲಾದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಲ್ಲಿ 20 ಜನರು ನಾಪತ್ತೆಯಾಗಿದ್ದಾರೆ. ಉತ್ತರಾಖಂಡದಲ್ಲಿ ಪ್ರವಾಹಕ್ಕೆ ಸಿಲುಕಿ 8 ಜನರು ಮೃತಪಟ್ಟಿದ್ದಾರೆ.
ದೇಶದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕರ್ನಾಟಕ, ಕೇರಳ, ಮಹಾರಾಷ್ಟ್ರ, ದೆಹಲಿ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ರಣಭೀಕರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಹಿಮಾಚಲ ಪ್ರದೇಶದ ಶೀಮ್ಲಾದಿಂದ 100 ಕಿ.ಮೀ ದೂರದಲ್ಲಿರುವ ರಾಂಪುರದ ಜಕ್ರಿಯಲ್ಲಿ ಮೇಘಸ್ಫೋಟ ಸಂಭವಿಸಿದೆ. 20 ಜನರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಶಿಮ್ಲಾ ಡಿಸಿ ಅನುಪಮ್ ಕಶ್ಯಪ್ ಹಾಗೂ ಎಸ್ ಪಿ ಸಂಜೀವ್ ಗಾಂಧಿಇ ಭೇಟಿ ನೀಡಿದ್ದು, ಎಸ್ ಡಿ ಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.