ಪ್ರಕರಣ ಒಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಂಕರ್ ದತ್ತ, ಭಾರತದಲ್ಲಿ 22 ಅಧಿಕೃತ ಭಾಷೆಗಳಿದ್ದರೂ ಸಹ ಹಿಂದಿಯನ್ನು ರಾಷ್ಟ್ರ ಭಾಷೆ ಎಂದು ಪರಿಗಣಿಸಲಾಗಿದೆ. ಹೀಗಾಗಿ ಸಾಕ್ಷಿದಾರರು ಹಿಂದಿಯಲ್ಲಿ ಹೇಳಿಕೆಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಫರೂಕಾಬಾದ್ ನ ವಾಹನ ಅಪಘಾತ ಪರಿಹಾರ ಪ್ರಾಧಿಕಾರದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಿಂದಿ ಭಾಷೆಯ ಸಮಸ್ಯೆ ಎದುರಾಗಬಹುದು ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳದ ಎಂಎಸಿಟಿಗೆ ವರ್ಗಾಯಿಸಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ದೀಪಂಕರ್ ದತ್ತ ಈ ವಿಷಯ ತಿಳಿಸಿದ್ದಾರೆ. ಈ ಅಪಘಾತ ಸಿಲಿಗುರಿಯಲ್ಲಿ ನಡೆದಿದ್ದ ಹಿನ್ನೆಲೆಯಲ್ಲಿ ಪ್ರಮೋದ್ ಸಿನ್ಹಾ ಎಂಬವರು ವಿಚಾರಣೆ ವೇಳೆ ಭಾಷೆ ಸಮಸ್ಯೆ ಎದುರಾಗಬಹುದು ಎಂಬ ಕಾರಣಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ, ಭಾರತವು ವಿವಿಧ ಜಾತಿ, ಧರ್ಮ, ಭಾಷೆಗಳನ್ನು ಹೊಂದಿರುವ ದೇಶವಾಗಿದ್ದು, ಪ್ರದೇಶವಾರು ಹಲವು ಭಾಷೆಗಳು ಅಸ್ತಿತ್ವದಲ್ಲಿವೆ ಎಂದು ಹೇಳಿದ ನ್ಯಾಯಮೂರ್ತಿ ದೀಪಂಕರ್ ದತ್ತ, 22 ಅಧಿಕೃತ ಭಾಷೆಗಳಿದ್ದರೂ ಸಹ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಪರಿಗಣಿಸಲಾಗಿದೆ, ಹೀಗಾಗಿ ಸಾಕ್ಷಿದಾರರು ಹಿಂದಿಯಲ್ಲಿ ಹೇಳಿಕೆಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.