ಮೈಸೂರು : ರಾಜ್ಯದಲ್ಲಿ ಕಾನೂನು ಸುವವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣ ಇಲ್ಲದಂತಾಗಿದೆ ಎಂದು: ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಿಂದೂ ಕಾರ್ಯಕರ್ತರು, ಸ್ವಾಮೀಜಿಗಳು, ಹಿರಿಯರ ರಕ್ಷಣೆ ಇಲ್ಲದಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಜಿಹಾದಿ ಮನಸ್ಥಿತಿ ಜನ ಎದ್ದು ಕೂರುತ್ತಾರೆ. ಕಾಂಗ್ರೆಸ್ ಸುಳ್ಳಿನ ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದಿದೆ. ಶವದ ಮೇಲೆ ಬಿಜೆಪಿ ಯಾವತ್ತೂ ರಾಜಕೀಯ ಮಾಡಿಲ್ಲ.ಸಿಬಿಐ ತನಿಖೆಗೆ ಕೊಟ್ರೆ ಸತ್ಯ ಹೊರಬರಲಿದೆ ಎಂದರು.