alex Certify ಹಿಂದೂ ಧರ್ಮ ಯಾವಾಗ ಹುಟ್ಟಿತು…? ಹುಟ್ಟಿಸಿದವರು ಯಾರು…?: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದ ಹೊತ್ತಲ್ಲೇ ಪರಮೇಶ್ವರ್ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂ ಧರ್ಮ ಯಾವಾಗ ಹುಟ್ಟಿತು…? ಹುಟ್ಟಿಸಿದವರು ಯಾರು…?: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದ ಹೊತ್ತಲ್ಲೇ ಪರಮೇಶ್ವರ್ ಹೇಳಿಕೆ

ತುಮಕೂರು: ಸನಾತನ ಧರ್ಮದ ಕುರಿತಾಗಿ ತಮಿಳುನಾಡು ಸಚಿವ ಉದಯಗಿರಿ ಸ್ಟಾಲಿನ್ ನೀಡಿದ ಹೇಳಿಕೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಹೊತ್ತಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹಿಂದೂ ಧರ್ಮದ ಕುರಿತಾಗಿ ಹೇಳಿಕೆ ನೀಡಿದ್ದಾರೆ.

ಹಿಂದೂ ಧರ್ಮ ಯಾವಾಗ ಹುಟ್ಟಿದ್ದು? ಯಾರು ಹುಟ್ಟಿಸಿದರು ಎಂದು ಸಚಿವ ಪರಮೇಶ್ವರ್ ಪ್ರಶ್ನಿಸಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮವನ್ನು ಯಾರು ಹುಟ್ಟಿಸಿದರು? ಯಾವಾಗ ಹುಟ್ಟಿದ್ದು ಎಂಬ ಬಗ್ಗೆ ಇನ್ನೂ ಪ್ರಶ್ನಾರ್ಥಕ ಚಿಹ್ನೆ ಇದೆ. ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ ಎಂದು ಹೇಳಿದ್ದಾರೆ.

ನಮ್ಮ ದೇಶದಲ್ಲಿ ಬೌದ್ಧ ಧರ್ಮ ಹಾಗೂ ಜೈನ ಧರ್ಮ ಹುಟ್ಟಿವೆ. ಹೊರಗಡೆಯಿಂದ ಇಸ್ಲಾಂ ಧರ್ಮ ಹಾಗೂ ಕ್ರೈಸ್ತ ಧರ್ಮ ಬಂದಿವೆ. ಮನುಕುಲಕ್ಕೆ ಒಳ್ಳೆಯದಾಗಬೇಕೆಂಬುದೇ ಎಲ್ಲಾ ಧರ್ಮಗಳ ಸಾರವಾಗಿದೆ ಎಂದು ಪರಮೇಶ್ವರ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...