
ಚಿಕ್ಕಬಳ್ಳಾಪುರ: ಪ್ರಚೋದನಕಾರಿ ಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡನೋರ್ವರನ್ನು ಗೌರಿಬಿದನೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ಸತೀಶ್ ಬಂಧಿತ. ಇವರು ಹಿಂದೂ ಜಾಗರಣಾ ವೇದಿಕೆ ಕರ್ನಾಟಕ ದಕ್ಷಿಣ ಭಾಗದ ಸಂಚಾಲಕ ಎಂದು ತಿಳಿದುಬಂದಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಸತೀಶ್, ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಗೌರಿಬಿದನೂರು ಠಾಣೆ ಪೊಲೀಸರು ಸತೀಶ್ ವಿರುದ್ಧ ಸುಮೊಟೊ ಅಡಿ ಐಪಿಸಿ ಸೆಕ್ಷನ್ 153A, 295A ಪ್ರಕರಣ ದಾಖಲಿಸಿದ್ದರು. ಪ್ರಕರಣ ಸಂಬಂಧ ಇದೀಗ ಸತೀಶ್ ರನ್ನು ಬಂಧಿಸಲಾಗಿದೆ.