ಮೀರತ್: ಕರೆನ್ಸಿ ನೋಟುಗಳ ಮೇಲೆ ಗಾಂಧಿಯವರ ಚಿತ್ರಕ್ಕೆ ಬದಲಾಗಿ ಸಾವರ್ಕರ್ ಅವರ ಚಿತ್ರಗಳನ್ನು ಹಿಂದೂ ಮಹಾಸಭಾ ಒತ್ತಾಯಿಸಿದೆ.
ಕರೆನ್ಸಿ ನೋಟುಗಳ ಮೇಲೆ ಮಹಾತ್ಮ ಗಾಂಧಿಯವರ ಚಿತ್ರವನ್ನು ಬದಲಿಸಿ ವಿ.ಡಿ. ಸಾವರ್ಕರ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಮುದ್ರಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಭಾನುವಾರ ಒತ್ತಾಯಿಸಿದೆ.
ಭಾರತ ಸರ್ಕಾರಕ್ಕೆ ಬರೆದ ಬಹಿರಂಗ ಪತ್ರದಲ್ಲಿ ಹಿಂದೂ ಮಹಾಸಭಾ ಸಂಸತ್ ಭವನಕ್ಕೆ ಹೋಗುವ ರಸ್ತೆಗೆ ಸಾವರ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡುವಂತೆ ಕೇಳಿಕೊಂಡಿದೆ.
ಇದು ಮೋದಿ ಸರ್ಕಾರದಿಂದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾದ ಮಾಜಿ ಅಧ್ಯಕ್ಷ ಸಾವರ್ಕರ್ ಅವರಿಗೆ ನಿಜವಾದ ಗೌರವವಾಗಿದೆ ಎಂದು ಮಹಾಸಭಾ ಮುಖಂಡರು ಹೇಳಿದ್ದಾರೆ.
ಶಾರದಾ ರಸ್ತೆಯಲ್ಲಿರುವ ಅಖಿಲ ಭಾರತ ಹಿಂದೂ ಮಹಾಸಭಾದ ಕಚೇರಿಯಲ್ಲಿ ಸಾವರ್ಕರ್ ಅವರ 58ನೇ ಪುಣ್ಯತಿಥಿಯನ್ನು ಭಾನುವಾರ ಹವನ ಪೂಜೆ ಹಾಗೂ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಪಂಡಿತ್ ಅಶೋಕ್ ಶರ್ಮಾ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಒಬ್ಬ ಮಹಾನ್ ಐತಿಹಾಸಿಕ ಕ್ರಾಂತಿಕಾರಿ. ಅವರ ಫೋಟೋವನ್ನು ಕರೆನ್ಸಿ ನೋಟುಗಳಲ್ಲಿ ಮುದ್ರಿಸಬೇಕು ಎಂದು ಹೇಳಿದ್ದಾರೆ.