ಬೆಂಗಳೂರು: ಅನ್ಯ ರಾಜ್ಯದಿಂದ ಬೆಂಗಳೂರಿಗೆ ಮಾಂಸ ತಂದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದಾರೆ.
ಕಾಟನ್ ಪೇಟೆ ಠಾಣೆ ಪೊಲೀಸರು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಮಾಂಸ ಮಾರಾಟ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುನೀತ್ ಕೆರೆಹಳ್ಳಿ ಬಂಧಿತರಾಗಿದ್ದಾರೆ.
ಬಂಧನದ ಬಳಿಕ ಠಾಣೆಯಲ್ಲಿ ಮಲಗಿದ್ದಾಗ ಪುನೀತ್ ಕೆರೆಹಳ್ಳಿ ಆಸ್ವಸ್ಥರಾಗಿದ್ದಾರೆ. ಮುಂಜಾನೆ 4:45 ಕ್ಕೆ ಪುನೀತ್ ಕೆರೆಯಲ್ಲಿ ಅಸ್ವಸ್ಥಗೊಂಡಿದ್ದು, ಅವರನ್ನು ಕೆ.ಸಿ. ಜನರಲ್ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.
ರಾಜಸ್ಥಾನದಿಂದ ಬಾಕ್ಸ್ ನಲ್ಲಿ ನಾಯಿ ಮಂಸ ಸಾಗಿಸಲಾಗುತ್ತಿದೆ ಎಂದು ಆರೋಪ ಮಾಡಿದ್ದ ಪುನೀತ್ ಕೆರೆಹಳ್ಳಿ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಬಾಕ್ಸ್ ಸಾಗಾಟ ತಡೆದಿದ್ದರು. ನಿನ್ನೆ ರಾತ್ರಿ ಕಾಟನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.