
ದಾವಣಗೆರೆ: ಹಿಂದೂ ಸಂಘಟನೆ ಮುಖಂಡ ಸತೀಶ್ ಪೂಜಾರಿಯನ್ನು ಬಂಧಿಸಲಾಗಿದೆ. ದಾವಣಗೆರೆ ಪೊಲೀಸರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಸತೀಶ್ ಪೂಜಾರಿಯನ್ನು ಬಂಧಿಸಿದ್ದಾರೆ.
ಹಿಂದೂ ಜಾಗರಣಾ ವೇದಿಕೆ ಮುಖಂಡ ಸತೀಶ್ ಪೂಜಾರಿ ದಾವಣಗೆರೆಯಲ್ಲಿ ಗಣೇಶ ಮೆರವಣಿಗೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಬಳಿಕ ಗಣೇಶ ವಿಸರ್ಜನಾ ಮೆರವಣಿಯಲ್ಲಿ ಕಲ್ಲು ತೂರಾಟ ನಡೆದಿತ್ತು.
ಈ ಬಗ್ಗೆ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದೂರು ದಾಖಲಾಗಿದ್ದು, ಸತೀಶ್ ಪೂಜಾರಿಯನ್ನು ಬಂಧಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.