alex Certify ‘ಹಿಂದೂ’ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ನಾಯಕರಿಂದಲೇ ಆಕ್ಷೇಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹಿಂದೂ’ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ನಾಯಕರಿಂದಲೇ ಆಕ್ಷೇಪ

ಬೆಂಗಳೂರು: ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ತೀವ್ರವಾಗಿ ಖಂಡಿಸಿದ್ದಾರೆ.

ಟ್ವೀಟ್ ಮೂಲಕ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿದ ಸುರ್ಜೆವಾಲಾ, ಹಿಂದೂ ಧರ್ಮ ಒಂದು ಜೀವನ ವಿಧಾನವಾಗಿದೆ. ಪ್ರತಿಯೊಂದು ಧರ್ಮ ನಂಬಿಕೆಯನ್ನು ಗೌರವಿಸಿಕೊಂಡು ಕಾಂಗ್ರೆಸ್ ಪಕ್ಷ ದೇಶವನ್ನು ಕಟ್ಟುವ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

ಹಿಂದೂ ಧರ್ಮ ಒಂದು ಜೀವನ ವಿಧಾನ ಮತ್ತು ನಾಗರಿಕತೆಯ ವಾಸ್ತವ. ಪ್ರತಿಯೊಂದು ಧರ್ಮ, ನಂಬಿಕೆ ಮತ್ತು ನಂಬಿಕೆಯನ್ನು ಗೌರವಿಸುತ್ತಾ ಕಾಂಗ್ರೆಸ್ ನಮ್ಮ ರಾಷ್ಟ್ರವನ್ನು ನಿರ್ಮಿಸಿದೆ. ಇದು ಭಾರತದ ಸತ್ವವಾಗಿದೆ. ಸತೀಶ್ ಜಾರಕಿಹೊಳಿ ಅವರ ಹೇಳಿಕೆಯು ಅತ್ಯಂತ ದುರದೃಷ್ಟಕರ ಮತ್ತು ತಿರಸ್ಕರಿಸಲು ಅರ್ಹವಾಗಿದೆ. ನಾವು ಅದನ್ನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...