
ಬೆಂಗಳೂರು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ವಿವಿಧ ವೃತ್ತಿಗಳಲ್ಲಿ ಐಟಿಐ ಪಾಸಾದ ಅರ್ಹ ಅಭ್ಯರ್ಥಿಗಳಿಂದ ‘ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಅಪ್ರೆಂಟಿಷಿಪ್ ತರಬೇತಿಯ ಅರ್ಜಿ ನಮೂನೆಗಳನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇಲ್ಲಿಂದ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು www.hal-india.com ರಿಂದ ಪಡೆಯಬಹುದು. ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇಲ್ಲಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 5 ರೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.