
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಯಾದಗಿರಿ ಮೂಲದ ಐಶ್ವರ್ಯಾ(12) ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.