
ಮಣಿಪುರದ ಅತ್ಯಂತ ಹಳೆಯ ಸಶಸ್ತ್ರ ಗುಂಪು ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (ಯುಎನ್‌ಎಲ್‌ಎಫ್) ಹಿಂಸಾಚಾರವನ್ನು ತ್ಯಜಿಸಲು ಒಪ್ಪಿಕೊಂಡಿದೆ ಮತ್ತು ಕೇಂದ್ರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿ ಮುಖ್ಯವಾಹಿನಿಗೆ ಸೇರಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಬುಧವಾರ ಮಾಹಿತಿ ನೀಡಿದ್ದಾರೆ.
ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ಮೋದಿ ಸರ್ಕಾರದ ಅವಿರತ ಪ್ರಯತ್ನಗಳು ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್(ಯುಎನ್‌ಎಲ್‌ಎಫ್) ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರಿಂದ ನೆರವೇರಿಕೆಯ ಹೊಸ ಅಧ್ಯಾಯವನ್ನು ಸೇರಿಸಿದೆ.
ಇಂದು ನವದೆಹಲಿಯಲ್ಲಿ ಮಣಿಪುರದ ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು UNLF ಹಿಂಸಾಚಾರವನ್ನು ತ್ಯಜಿಸಲು ಮತ್ತು ಮುಖ್ಯವಾಹಿನಿಗೆ ಸೇರಲು ಒಪ್ಪಿಕೊಂಡಿದೆ. ನಾನು ಅವರನ್ನು ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ಸ್ವಾಗತಿಸುತ್ತೇನೆ ಮತ್ತು ಶಾಂತಿ ಮತ್ತು ಪ್ರಗತಿಯ ಹಾದಿಯಲ್ಲಿ ಅವರ ಪ್ರಯಾಣಕ್ಕೆ ಶುಭ ಹಾರೈಸುತ್ತೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಭಾರತ ಸರ್ಕಾರ ಮತ್ತು ಮಣಿಪುರ ಸರ್ಕಾರ ಯುಎನ್‌ಎಲ್‌ಎಫ್‌ನೊಂದಿಗಿನ ಶಾಂತಿ ಒಪ್ಪಂದವು ಆರು ದಶಕಗಳ ಕಾಲದ ಸಶಸ್ತ್ರ ಚಳವಳಿಯ ಅಂತ್ಯವನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಆವರ ಸರ್ವರನ್ನೊಳಗೊಂಡ ಅಭಿವೃದ್ಧಿಯ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಮತ್ತು ಈಶಾನ್ಯ ಭಾರತದ ಯುವಕರಿಗೆ ಉತ್ತಮ ಭವಿಷ್ಯವನ್ನು ಒದಗಿಸುವಲ್ಲಿ ಇದು ಸಾಧನೆಯಾಗಿದೆ ಎಂದು ಅವರು ಹೇಳಿದ್ದಾರೆ.