ಚಿಕ್ಕಮಗಳೂರು : ಶೃಂಗೇರಿ ಶ್ರೀಶಾರದಾ ಪೀಠದಲ್ಲಿ ಜಗದ್ಗುರು ಶ್ರೀಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳ ಸನ್ಯಾಸ ಸ್ವೀಕರಿಸಿ 50 ವರ್ಷ ಪೂರೈಸಿದ ಸ್ವರ್ಣ ಸಂಭ್ರಮದ ಹಿನ್ನೆಲೆಯಲ್ಲಿ “ಸ್ತೋತ್ರ ತ್ರಿವೇಣಿಯ ಮಹಾ ಸಮರ್ಪಣೆ” ಎಂಬ ಐತಿಹಾಸಿಕ ಸ್ತೋತ್ರ ಪಠಣ ಕಾರ್ಯಕ್ರಮವು ಇಂದು ನೆರವೇರಲಿದೆ.
ಶೃಂಗೇರಿಯ ಶಾರದಾ ಪೀಠದಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದ್ದು, 50 ಸಾವಿರ ಜನರಿಂದ ಶ್ಲೋಕ ಪಠಣ ನಡೆಯಲಿದೆ.
ಜಗದ್ಗುರು ಶ್ರೀಭಾರತೀತೀರ್ಥ ಮಹಾಸ್ವಾಮೀಜಿಗಳವರ ಸನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವ ಸಲುವಾಗಿ ಇಂದು ಶನಿವಾರ ಬೆಳಿಗ್ಗೆ ಸ್ತೋತ್ರ ತ್ರಿವೇಣಿಯ ಮಹಾಸಮರ್ಪಣೆ ನೆರವೇರಲಿದ್ದು 50 ಸಾವಿರಕ್ಕೂ ಹೆಚ್ಚು ಜನರು ಶ್ಲೋಕ ಪಠಣ ಮಾಡಲಿದ್ದಾರೆ. ನರಸಿಂಹವನದದಲ್ಲಿ ಈ ಕಾರ್ಯಕ್ರಮ ನೆರವೇರಲಿದ್ದು, ಇದಕ್ಕಾಗಿ ಬೃಹತ್ ವೇದಿಕೆ ಸಿದ್ದವಾಗಿದೆ. ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲೂಕಿನಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು,ಮಹಿಳೆಯರು, ಸೇರಿದಂತೆ ಸುಮಾರು 50,000 ಕ್ಕೂ ಅಧಿಕ ಜನ ಭಕ್ತರು ಸ್ತೋತ್ರ ಪಠಣೆಯಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.