ಬೆಂಗಳೂರು : ಬೈಕ್ ಸವಾರನಿಗೆ ಕಾರು ಗುದ್ದಿ ಎಸ್ಕೇಪ್ ಆದ ಆರೋಪಕ್ಕೆ ಸಂಬಂಧಿಸಿದಂತೆ ‘ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಂದ್ರಪ್ರಭಾ ವಿರುದ್ಧ ದೂರು ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಮಾಲ್ತೇಶ್ ಎಂಬ ಬೈಕ್ ಸವಾರನಿಗೆ ಚಂದ್ರಪ್ರಭಾ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಚಂದ್ರಪ್ರಭ ಅವರು ಹಿಟ್ & ರನ್ ಮಾಡಿ ಪರಾರಿ ಆಗಿದ್ದಾರೆ ಎಂದು ಆರೋಪ ಮಾಡಲಾಗಿದೆ. ಈ ಸಂಬಂಧ ಮಾಲ್ತೇಶ್ ಸಂಬಂಧಿಕರಿಂದ ಚಿಕ್ಕಮಗಳೂರು ನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಸವಾರ ಮದ್ಯಪಾನ ಮಾಡಿದ್ದನು, ನಾವೇ ಆತನನ್ನು ಆಸ್ಪತ್ರೆಗೆ ಸೇರಿಸಿದ್ದೇವೆ ಎಂದು ಚಂದ್ರಪ್ರಭಾ ಹೇಳಿದ್ದಾರೆ. ಆದರೆ ಚಂದ್ರಪ್ರಭಾ ಅಪಘಾತ ನಡೆದರೂ ಮಾನವೀಯತೆ ತೋರಲಿಲ್ಲ, ಬೇರೆ ಯಾರೋ ಮಾಲ್ತೇಶ್ ನನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ , ನನ್ನ ತಮ್ಮನಿಗೆ ಕುಡಿಯುವ ಅಭ್ಯಾಸವಿಲ್ಲ ಎಂದು ಗಾಯಾಳು ಮಾಲ್ತೇಶ್ ಅಣ್ಣ ರಘು ಹೇಳಿಕೆ ನೀಡಿದ್ದಾರೆ. ಚಂದ್ರಪ್ರಭಾ ಅವರೇ ಕುಡಿದು ವಾಹನ ಚಲಾಯಿಸಿದ್ದಾರೆ ಎನ್ನುವ ಅನುಮಾನ ಇದೆ” ಎಂದು ರಘು ಹೇಳಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.