ಬೀದರ್: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಪಾಂಡ್ರಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ನಾಗೂರಾವ್ (40) ಹಾಗೂ ಭಾನುದಾಸ್ (42) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ನಾಂಡೇಡ್ ಗ್ರಾಮದವರು. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೂವರು ಬೈಕ್ ನಲ್ಲಿ ನಾಂದೇಡ್ ಗೆ ತೆರಳುತ್ತಿದ್ದರು. ಈ ವೇಳೆ ಪಾಂಡ್ರಿ ಬಸ್ ನಿಲ್ದಣದ ಬಳಿ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಓರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಹಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.