
ಬೆಂಗಳೂರು: ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗಾಣಕಲ್ ರಸ್ತೆ ಬಳಿ ಸಂಭವಿಸಿದೆ.
ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ಬಳಿಕ ಕಾರಿನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಜಯ್ ಕುಮಾರ್ ಮೃತ ದುರ್ದೈವಿ. ಸ್ಥಳಕ್ಕೆ ಭೇಟಿ ನೀಡಿರುವ ಕೆಂಗೇರಿ ಸಂಚಾರಿ ವಿಭಾಗದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನಿಗಾಗಿ ಶೋಧ ನಡೆಸಿದ್ದಾರೆ.