ಬೆಂಗಳೂರು: ಕೇಂದ್ರೀಯ ಭಂಡಾರದಿಂದ ಕಳಪೆ ಸಮವಸ್ತ್ರ ಪೂರೈಕೆ ಬಗ್ಗೆ ತನಿಖೆ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ಕಳಪೆ ಸಮವಸ್ತ್ರ ಪೂರೈಕೆ ಮಾಡಲಾಗಿತ್ತು. ಶಾಲಾ ಸಮವಸ್ತ್ರ ಪೂರೈಸಿದ ಕೆಹೆಚ್‌ಡಿಸಿ ಗೆ 14.48 ಕೋಟಿ ಬಿಡುಗಡೆ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಸ್ಥಳೀಯ ಸಂಸ್ಥೆಗಳ ಮೀಸಲಾತಿ ಬಗ್ಗೆ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ಶಿಫಾರಸಿನ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನಿಸಲಾಗುವುದು. ಬರ ತಾಲೂಕು ಘೋಷಣೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿ ಘೋಷಣೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.