ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ವಿರುದ್ಧದ ಸುಗ್ರೀವಾಜ್ಞೆ ಸಿದ್ಧವಾಗಿದ್ದು, ಇಂದು ಸಂಪುಟದ ಮುಂದೆ ಕರಡು ಮಂಡಿಸಲಾಗುವುದು. ಸಂಪುಟ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ರವಾನೆ ಮಾಡಲಾಗುತ್ತದೆ.
ಸಾಲ ವಸೂಲಾತಿಯ ಸಂದರ್ಭದಲ್ಲಿ ಸಾಲಗಾರರಿಗೆ ಕಿರಕುಳ, ಅಮಾನವೀಯ ವರ್ತನೆ ತೋರುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆ ಜಾರಿ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.
ಬುಧವಾರ ವಿಧಾನಸೌಧದಲ್ಲಿ ಮಸೂದೆ ಅಂತಿಮಗೊಳಿಸುವ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ. ಸಾಲ ವಸೂಲಾತಿ ಸಂದರ್ಭದಲ್ಲಿ ಮೈಕ್ರೋ ಫೈನಾನ್ಸ್ ಗಳು ಅಮಾನವೀಯವಾಗಿ ವರ್ತಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲಾಗುವುದು ಎಂದು ಹೇಳಲಾಗಿದೆ.